ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ. ನಿಶ್ಚಯವಾಗಿಯೂ ಸೂರ ‌ಬಕರ ಪಠಿಸಲಾಗುವ ಮನೆಯಿಂದ ಶೈತಾನನು ಓಡಿ ಹೋಗುತ್ತಾನೆ." Sahih/Authentic. - Muslim
explain-icon

ವಿವರಣೆ

ಮನೆಗಳಲ್ಲಿ ನಮಾಝ್ ಮಾಡದಿರುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಹದೀಸಿನಲ್ಲಿ ವಿರೋಧಿಸುತ್ತಾರೆ. ಏಕೆಂದರೆ ಇದರಿಂದ ಮನೆಗಳು ಸಮಾಧಿಸ್ಥಳವಾಗಿ ಮಾರ್ಪಡುತ್ತದೆ. ಸಮಾಧಿಸ್ಥಳವು ನಮಾಝ್ ಮಾಡುವ ಸ್ಥಳವಲ್ಲ. ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೂರ ‌ಬಕರ ಪಠಿಸಲಾಗುವ ಮನೆಯಿಂದ ಶೈತಾನನು ಓಡಿ ಹೋಗುತ್ತಾನೆ ಎಂದು ತಿಳಿಸುತ್ತಾರೆ.

explain-icon

ಹದೀಸಿನ ಪ್ರಯೋಜನಗಳು

  • ಮನೆಗಳಲ್ಲಿ ಆರಾಧನೆಗಳನ್ನು ಮತ್ತು ಐಚ್ಛಿಕ ನಮಾಝ್‌ಗಳನ್ನು ಹೆಚ್ಚಿಸಲು ಈ ಹದೀಸಿನಲ್ಲಿ ಪ್ರೋತ್ಸಾಹವಿದೆ.
  • ಸಮಾಧಿಸ್ಥಳದಲ್ಲಿ ನಮಾಝ್ ಮಾಡಬಾರದು. ಏಕೆಂದರೆ ಅದು ಶಿರ್ಕ್ (ಬಹುದೇವಾರಾಧನೆ)ಗೆ ಮತ್ತು ಸಮಾಧಿಗಳಲ್ಲಿರುವ ವ್ಯಕ್ತಿಗಳ ವಿಷಯದಲ್ಲಿ ಹದ್ದು ಮೀರುವುದಕ್ಕೆ ಕಾರಣವಾಗುತ್ತದೆ. ಆದರೆ ಅಂತ್ಯಕ್ರಿಯೆಯ (ಜನಾಝ) ನಮಾಝನ್ನು ಇದರಿಂದ ಹೊರತುಪಡಿಸಲಾಗಿದೆ.
  • ಸಮಾಧಿಗಳ ಬಳಿ ನಮಾಝ್ ಮಾಡಬಾರದೆಂಬ ವಿರೋಧವು ಸಹಾಬಿಗಳ ನಡುವೆ ಅಂಗೀಕೃತವಾಗಿತ್ತೆಂದು ಈ ಹದೀಸಿನಿಂದ ತಿಳಿಯುತ್ತದೆ. ಈ ಕಾರಣದಿಂದಲೇ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮನೆಯಲ್ಲಿ ನಮಾಝ್ ನಿರ್ವಹಿಸದಿದ್ದರೆ ಅದು ಸಮಾಧಿ ಸ್ಥಳವಾಗುತ್ತದೆಯೆಂದು ಹೇಳಿದರು. ಏಕೆಂದರೆ ಸಮಾಧಿಗಳ ಬಳಿ ನಮಾಝ್ ಮಾಡುವುದನ್ನು ನಿಷೇಧಿಸಲಾಗಿದೆ.
explain-icon

ವರ್ಗಗಳು

explain-icon

ಇನ್ನಷ್ಟು