ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಇಲ್ಲಿ ಹೇಳುವುದೇನೆಂದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಲ್ಲಾಹನನ್ನು ಸ್ಮರಿಸಲು ಅತೀವ ಉತ್ಸಾಹ ತೋರುತ್ತಿದ್ದರು. ಅವರು ಎಲ್ಲಾ ಸಮಯ, ಸ್ಥಳ ಮತ್ತು ಸ್ಥಿತಿಗಳಲ್ಲಿ ಅಲ್ಲಾಹನನ್ನು ಸ್ಮರಿಸುತ್ತಿದ್ದರು.