ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಕಷ್ಟದಲ್ಲಿರುವ ವ್ಯಕ್ತಿಗೆ ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಪುನರುತ್ಥಾನ ದಿನದಂದು, ಅಂದರೆ ಅಲ್ಲಾಹನ ನೆರಳಿನ ಹೊರತು ಬೇರೆ ನೆರಳಿಲ್ಲದ ದಿನದಂದು, ಅಲ್ಲಾಹು ತನ್ನ ಸಿಂಹಾಸನದ ನೆರಳಿನಲ್ಲಿ ನೆರಳು ನೀಡುತ್ತಾನೆ." Sahih/Authentic. - At-Tirmidhi
explain-icon

ವಿವರಣೆ

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಸಾಲಗಾರನಿಗೆ ಸಾಲ ಮರುಪಾವತಿ ಮಾಡಲು ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಸಿಗುವ ಪ್ರತಿಫಲವು: ಪುನರುತ್ಥಾನ ದಿನದಂದು ಅಲ್ಲಾಹು ಅವನಿಗೆ ತನ್ನ ಸಿಂಹಾಸನದ ನೆರಳಿನಲ್ಲಿ ನೆರಳು ನೀಡುತ್ತಾನೆ. ಅಂದು ಸೂರ್ಯನು ಜನರ ತಲೆಯ ಹತ್ತಿರದಲ್ಲಿದ್ದು ಅದರ ಶಾಖವು ಬಹಳ ಕಠೋರವಾಗಿರುತ್ತದೆ. ಅಂದು ಅಲ್ಲಾಹು ನೀಡಿದ ನೆರಳಿನ ಹೊರತು ಬೇರೆ ಯಾವುದೇ ನೆರಳೂ ಇರುವುದಿಲ್ಲ.

explain-icon

ಹದೀಸಿನ ಪ್ರಯೋಜನಗಳು

  • ಜನರಿಗೆ ವಿಷಯಗಳನ್ನು ಸುಲಭಗೊಳಿಸುವುದರ ಶ್ರೇಷ್ಠತೆಯನ್ನು ಮತ್ತು ಅದು ಪುನರುತ್ಥಾನ ದಿನದ ಭಯಾನಕತೆಗಳಿಂದ ಪಾರಾಗುವ ಒಂದು ಮಾರ್ಗವೆಂದು ಈ ಹದೀಸ್ ತಿಳಿಸುತ್ತದೆ.
  • ಪ್ರತಿಫಲವು ಕರ್ಮದ ಅದೇ ವರ್ಗಕ್ಕೆ ಸೇರಿರುತ್ತದೆ.
explain-icon

ವರ್ಗಗಳು

explain-icon

ಇನ್ನಷ್ಟು