ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗಕ್ಕೆ ಹೋಗಲು) ನಿರಾಕರಿಸುವವನು ಯಾರು?" ಅವರು ಉತ್ತರಿಸಿದರು: "ಯಾರು ನನ್ನ ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ಸ್ವರ್ಗಕ್ಕೆ ಹೋಗುತ್ತಾನೆ; ಮತ್ತು ಯಾರು ನನ್ನ ಆಜ್ಞೆಗಳನ್ನು ಪಾಲಿಸುವುದಿಲ್ಲವೋ ಅವನು (ಸ್ವರ್ಗಕ್ಕೆ ಹೋಗಲು) ನಿರಾಕರಿಸಿದನು." Sahih/Authentic. - Al-Bukhari
explain-icon

ವಿವರಣೆ

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಅವರ ಸಮುದಾಯಕ್ಕೆ ಸೇರಿದ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವರ ಹೊರತು! ಆಗ ಸಂಗಡಿಗರು (ಅಲ್ಲಾಹು ಅವರೆಲ್ಲರ ಬಗ್ಗೆ ಸಂಪ್ರೀತನಾಗಲಿ) ಕೇಳುತ್ತಾರೆ: "ಓ ಅಲ್ಲಾಹನ ಸಂದೇಶವಾಹಕರೇ! ನಿರಾಕರಿಸುವವರು ಯಾರು?!" ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸುತ್ತಾ ಹೇಳುತ್ತಾರೆ: "ಯಾರು ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆಜ್ಞಾಪಾಲನೆ ಮಾಡುತ್ತಾನೋ ಮತ್ತು ಅನುಸರಿಸುತ್ತಾನೋ ಅವನು ಸ್ವರ್ಗಕ್ಕೆ ಹೋಗುತ್ತಾನೆ; ಆದರೆ, ಯಾರು ಅವರ ಆಜ್ಞಾಪಾಲನೆ ಮಾಡುವುದಿಲ್ಲವೋ ಮತ್ತು ಧರ್ಮನಿಯಮಗಳನ್ನು ಅನುಸರಿಸುವುದಿಲ್ಲವೋ ಅವನು ತನ್ನ ದುಷ್ಕರ್ಮಗಳ ನಿಮಿತ್ತ ಸ್ವರ್ಗಕ್ಕೆ ಹೋಗಲು ನಿರಾಕರಿಸಿದ್ದಾನೆ."

explain-icon

ಹದೀಸಿನ ಪ್ರಯೋಜನಗಳು

  • ಸಂದೇಶವಾಹಕರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನುಸರಿಸುವುದು ಅಲ್ಲಾಹನಿಗೆ ವಿಧೇಯತೆ ತೋರುವ ಒಂದು ಭಾಗವಾಗಿದೆ. ಅವರನ್ನು ಅನುಸರಿಸದಿರುವುದು ಅಲ್ಲಾಹನಿಗೆ ತೋರುವ ಅವಿಧೇಯತೆಯಾಗಿದೆ.
  • ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನುಸರಿಸಿದರೆ ಸ್ವರ್ಗ ಖಾತ್ರಿಯಾಗುತ್ತದೆ ಮತ್ತು ಅವರನ್ನು ಅನುಸರಿಸದಿದ್ದರೆ ನರಕ ಖಾತ್ರಿಯಾಗುತ್ತದೆ.
  • ಅಲ್ಲಾಹನಿಗೆ ಮತ್ತು ಸಂದೇಶವಾಹಕರಿಗೆ ವಿಧೇಯರಾಗಿರುವವರಿಗೆ ಈ ಹದೀಸ್ ಸುವಾರ್ತೆಯನ್ನು ತಿಳಿಸುತ್ತದೆ. ಅಂದರೆ ಅವರೆಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ. ಆದರೆ ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸದವರು ಸ್ವರ್ಗಕ್ಕೆ ಹೋಗುವುದಿಲ್ಲ.
  • ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸಮುದಾಯದ ಮೇಲಿರುವ ಸಹಾನುಭೂತಿ ಮತ್ತು ಸಮುದಾಯಕ್ಕೆ ಸನ್ಮಾರ್ಗವನ್ನು ತೋರಿಸಲು ಅವರಲ್ಲಿದ್ದ ತವಕವನ್ನು ಈ ಹದೀಸ್ ವ್ಯಕ್ತಪಡಿಸುತ್ತದೆ.
explain-icon

ವರ್ಗಗಳು

explain-icon

ಇನ್ನಷ್ಟು