ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ...

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗ ಮತ್ತು ನರಕವನ್ನು) ಕಡ್ಡಾಯಗೊಳಿಸುವ ಎರಡು ವಿಷಯಗಳು ಯಾವುವು?" ಅವರು ಉತ್ತರಿಸಿದರು: "ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ."
Sahih/Authentic. - Muslim

ಒಬ್ಬ ವ್ಯಕ್ತಿ ಪ್ರವಾದಿಯರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ಬಗ್ಗೆ, ಅಂದರೆ ಸ್ವರ್ಗ ಪ್ರವೇಶವನ್ನು ಕಡ್ಡಾಯಗೊಳಿಸುವ ಮತ್ತು ನರಕ ಪ್ರವೇಶವನ್ನು ಕಡ್ಡಾಯಗೊಳಿಸುವ ಎರಡು ವಿಷಯಗಳ ಬಗ್ಗೆ ಕೇಳುತ್ತಾರೆ: ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸುತ್ತಾರೆ: "ಸ್ವರ್ಗವನ್ನು ಕಡ್ಡಾಯಗೊಳಿಸುವ ವಿಷಯ ಯಾವುದೆಂದರೆ ಒಬ್ಬ ವ್ಯಕ್ತಿ ಅಲ್ಲಾಹನನ್ನು ಮಾತ್ರ ಆರಾಧಿಸುತ್ತಾ ಮತ್ತು ಅವನೊಡನೆ ಯಾವುದೇ ಸಹಭಾಗಿತ್ವ (ಶಿರ್ಕ್) ಮಾಡದೆ ಮರಣ ಹೊಂದುವುದು. ನರಕವನ್ನು ಕಡ್ಡಾಯಗೊಳಿಸುವ ವಿಷಯ ಯಾವುದೆಂದರೆ, ಅಲ್ಲಾಹನೊಡನೆ ಸಹಭಾಗಿತ್ವ ಮಾಡುತ್ತಾ, ಅವನ ಪ್ರಭುತ್ವದಲ್ಲಿ, ಆರಾಧನೆಯಲ್ಲಿ, ಮತ್ತು ಅವನ ಹೆಸರು ಮತ್ತು ಗುಣಲಕ್ಷಣಗಳಲ್ಲಿ ಅವನಿಗೆ ಸರಿಸಮಾನರನ್ನು ನಿಶ್ಚಯಿಸಿದ ಸ್ಥಿತಿಯಲ್ಲಿ ಮರಣಹೊಂದುವುದು.

  1. ಈ ಹದೀಸ್ ಏಕದೇವ ವಿಶ್ವಾಸದ ಶ್ರೇಷ್ಠತೆಯನ್ನು, ಅಂದರೆ ಒಬ್ಬ ವ್ಯಕ್ತಿ ಅಲ್ಲಾಹನೊಡನೆ ಯಾವುದೇ ಸಹಭಾಗಿತ್ವ (ಶಿರ್ಕ್) ಮಾಡದೆ ಸತ್ಯವಿಶ್ವಾಸಿಯಾಗಿ ಮರಣ ಹೊಂದಿದರೆ ಅವನು ಸ್ವರ್ಗವಾಸಿಯಾಗುತ್ತಾನೆಂದು ವಿವರಿಸುತ್ತದೆ.
  2. ಈ ಹದೀಸ್ ಸಹಭಾಗಿತ್ವದ (ಶಿರ್ಕ್) ಅಪಾಯವನ್ನು, ಅಂದರೆ ಒಬ್ಬ ವ್ಯಕ್ತಿ ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡಿ ಮರಣ ಹೊಂದಿದರೆ ಅವನು ನರಕವಾಸಿಯಾಗುತ್ತಾನೆಂದು ತಿಳಿಸುತ್ತದೆ.
  3. ಏಕದೇವ ವಿಶ್ವಾಸಿಗಳ ಪೈಕಿ ಪಾಪವೆಸಗಿದವರ ವಿಧಿಯು ಅಲ್ಲಾಹನ ಇಚ್ಚೆಗೆ ಒಳಪಟ್ಟಿದೆ. ಅವನು ಅವರನ್ನು ಶಿಕ್ಷಿಸಬಹುದು ಅಥವಾ ಅವರನ್ನು ಕ್ಷಮಿಸಬಹುದು. ಶಿಕ್ಷೆಗೆ ಒಳಗಾದವರು ಶಿಕ್ಷೆಯ ನಂತರ ಸ್ವರ್ಗಕ್ಕೆ ಹೋಗುತ್ತಾರೆ.

ಯಶಸ್ವಿಯಾಗಿ ರವಾನಿಸಲಾಗಿದೆ!