ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ...

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ."
Sahih/Authentic. - Al-Bukhari and Muslim

ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ. ಈ ವಿರೋಧವು ಪುರುಷರಲ್ಲಿ ಹಿರಿಯರು ಮತ್ತು ಕಿರಿಯರೆಲ್ಲರಿಗೂ ಅನ್ವಯವಾಗುತ್ತದೆ. ಮಹಿಳೆಯರು ತಲೆಗೂದಲನ್ನು ಬೋಳಿಸಬಾರದು.

  1. ಮನುಷ್ಯನ ರೂಪದ ಬಗ್ಗೆ ಇಸ್ಲಾಂ ಧರ್ಮವು ಕಾಳಜಿ ವಹಿಸುತ್ತದೆಯೆಂದು ಈ ಹದೀಸ್ ತಿಳಿಸುತ್ತದೆ.

ಯಶಸ್ವಿಯಾಗಿ ರವಾನಿಸಲಾಗಿದೆ!