“ಚಾಡಿಕೋರ ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”

ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಚಾಡಿಕೋರ ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
Sahih/Authentic. - Al-Bukhari and Muslim

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಜನರ ನಡುವಿನ ಸಂಬಂಧಗಳಿಗೆ ಹುಳಿ ಹಿಂಡಲು ಯಾರು ಒಬ್ಬರ ಮಾತನ್ನು ಇನ್ನೊಬ್ಬರಿಗೆ ತಲುಪಿಸುತ್ತಾರೋ ಅವರು ಶಿಕ್ಷಾರ್ಹರಾಗಿದ್ದು ಸ್ವರ್ಗವನ್ನು ಪ್ರವೇಶಿಸುವುದಿಲ್ಲ.

  1. ಚಾಡಿ ಹೇಳುವುದು ಮಹಾಪಾಪವಾಗಿದೆ.
  2. ಚಾಡಿ ಹೇಳುವುದನ್ನು ಈ ಹದೀಸ್ ವಿರೋಧಿಸುತ್ತದೆ. ಏಕೆಂದರೆ ಅದು ವ್ಯಕ್ತಿ ಮತ್ತು ಸಮಾಜಗಳ ನಡುವೆ ಭ್ರಷ್ಟತೆ ಮತ್ತು ಹಾನಿಗಳನ್ನು ಉಂಟು ಮಾಡುತ್ತದೆ.

ಯಶಸ್ವಿಯಾಗಿ ರವಾನಿಸಲಾಗಿದೆ!