ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಮ್ಮಲ್ಲೊಬ್ಬನು ತನ್ನ ಮನಸ್ಸಿನಲ್ಲಿ ಕೆಲವು ದುರ್ವಿಚಾರಗಳು ಬಂದು ಹೋಗುವಂತೆ ಅನುಭವಿಸುತ್ತಾನೆ. ಅವುಗಳ ಬಗ್ಗೆ ಮಾತನಾಡುವುದಕ್ಕಿಂತಲೂ ಬೂದಿಯಾಗಿ ಮಾರ್ಪಡುವುದೇ ಅವನಿಗೆ ಹೆಚ್ಚು ಇಷ್ಟವಾಗಿದೆ." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಬಾರಿ ಅಲ್ಲಾಹು ಮಹಾನನು ಎಂದು ಹೇಳಿದರು. ನಂತರ, ಶೈತಾನನ ಕುತಂತ್ರವನ್ನು ಕೇವಲ ದುರ್ಭೋದನೆಯಾಗಿ ಮಾರ್ಪಡಿಸಿದ ಅಲ್ಲಾಹನಿಗೆ ಸ್ತುತಿಯನ್ನು ಅರ್ಪಿಸಿದರು.